ಕುರುಡು ಕಾಂಚಾಣ ಕುಣಿಯುತಲಿತ್ತು
ಕಾಲಿಗೆ ಬಿದ್ದವರ ತುಳಿಯುತಲಿತ್ತೊ
ಕುರುಡು ಕಾಂಚಾಣ
ಬಾಣಂತಿಯೆಂಬಾ ಸಾ-
ಬಾಣದ ಬಿಳುಪಿನಾ
ಕಾಣದ ಕಿರುಗೆಜ್ಜೆ ಕಾಲಾಗೆ ಇತ್ತೋ
ಸಣ್ಣ ಕಂದಮ್ಮಗಳ
ಕಣ್ಣೀನ ಕವಡಿಯ
ತಣ್ಣನ್ನ ಜೋಮಾಲೆ ಕೊರಳೊಳಗಿತ್ತೋ
ಬಡವರ ಒಲವಿನ
ಬಡಬಾsನಲದಲ್ಲಿ
ಸುಡು ಸುಡು ಪಂಜವು ಕೈಯೊಳಗಿತ್ತೊ
ಕಂಬನಿ ಕುಡಿಯುವ
ಹುಂಬ ಬಾಯಿಲೆ ಮೈ-
ದುಂಬಿದಂತಧೊ ಉಧೊ ಎನ್ನುತ್ತಲಿತ್ತೊ
ಕೂಲಿ ಕಂಬಳಿಯವರ
ಪಾಲಿನ ಮೈದೊಗಲ
ಧೂಳಿಯ ಭಂಡಾರ ಹಣೆಯೊಳಗಿತ್ತೊ;
ಗುಡಿಯೊಳಗೆ ಗಣಣ ಮಾ-
ಹಡಿಯೊಳಗೆ ತನನ ಅಂ-
ಗಡಿಯೊಳಗ ಝಣಣ ನುಡಿಗೊಡುತ್ತಿತ್ತೋ
ಹ್ಯಾಂಗಾರೆ ಕುಣಿಕುಣಿದು
ಮಂಗಾಟ ನಡೆದಾಗ
ಅಂಗಾತ ಬಿತ್ತೋ, ಹೆಗಲಿ ಎತ್ತೋ
- ದ ರಾ ಬೇಂದ್ರೆ
ಕೃಪೆ:
ಕರ್ನಾಟಕ ರಾಜ್ಯ 8 ನೇ ತರಗತಿ ಕನ್ನಡ ಪಠ್ಯ ಪುಸ್ತಕ 2010
You Might Also Like :
If you Like This Article,Then kindly linkback to this article by copying one of the codes below.
URL Of Post:
Paste This HTML Code On Your Page:
0 comments:
Post a comment